Sunday, July 7, 2024
Homeಕ್ರೀಡೆT20 World Cup 2024: ಚಾಂಪಿಯನ್ ಪಟ್ಟಕ್ಕಾಗಿ ಇಂದು ಭಾರತ - ಸೌತ್ ಆಫ್ರಿಕಾ ಸೆಣಸಾಟ

T20 World Cup 2024: ಚಾಂಪಿಯನ್ ಪಟ್ಟಕ್ಕಾಗಿ ಇಂದು ಭಾರತ – ಸೌತ್ ಆಫ್ರಿಕಾ ಸೆಣಸಾಟ

ನವದೆಹಲಿ : ಬ್ರಿಟಿಷರನ್ನು ( ಇಂಗ್ಲೆಂಡ್ ತಂಡ) ಬಗ್ಗು ಬಡಿದು ಟಿ20 ವಿಶ್ವಕಪ್ನ ಫೈನಲ್ ಲಗ್ಗೆಯಿಟ್ಟಿರುವ ಭಾರತೀಯ ತಂಡು ಇಂದು ಟಿ-20 ವಿಶ್ವಕಪ್ಗಾಗಿ ಸೌತ್ ಆಫ್ರಿಕಾ ತಂಡದ ರೋಚಕ ಹೋರಾಟ ನಡೆಸಲಿದೆ.

ಇಂದು (ಜೂನ್.29) ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಉಭಯ ತಂಡಗಳು ಈ ಬಾರಿಯ ವಿಶ್ವಕಪ್ನಲ್ಲಿ ಸೋಲಿಲ್ಲದ ಸರದಾರರಾಗಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಟೀಮ್ ಇಂಡಿಯಾ ಆಡಿರುವ 7 ಪಂದ್ಯಗಳಲ್ಲೂ ವಿಜಯ ಸಾಧಿಸಿದರೆ, ಅತ್ತ ಸೌತ್ ಆಫ್ರಿಕಾ 8 ಮ್ಯಾಚ್ಗಳನ್ನು ಗೆದ್ದು ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಹೀಗಾಗಿ ಫೈನಲ್ನಲ್ಲಿ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ.

ಟಿ20 ಕ್ರಿಕೆಟ್ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 13 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಟಿ20 ವಿಶ್ವಕಪ್‌ ನಲ್ಲಿ ಉಭಯ ತಂಡಗಳು ಒಟ್ಟು 6 ಬಾರಿ ಪರಸ್ಪರ ಕಣಕ್ಕಿಳಿದಿದೆ. ಈ ವೇಳೆ ಟೀಮ್ ಇಂಡಿಯಾ 4 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೌತ್ ಆಫ್ರಿಕಾ ಗೆದ್ದಿರುವುದು ಕೇವಲ 2 ಬಾರಿ ಮಾತ್ರ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್ವರ್ಕ್ನ ಎಲ್ಲಾ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್ನಲ್ಲಿ ಉಚಿತ ನೇರ ಪ್ರಸಾರ ಇರಲಿದೆ.

ಹೆಚ್ಚಿನ ಸುದ್ದಿ