Sunday, July 7, 2024
Homeಕ್ರೀಡೆT20 WORLD CUP : ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ

T20 WORLD CUP : ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ

ವೆಸ್ಟ್‌ಇಂಡೀಸ್‌: ಟಿ20 ವಿಶ್ವಕಪ್‌ನ ಸೂಪರ್-8 ಸುತ್ತು ಕೂಡ ಕೊನೆಯ ಹಂತಕ್ಕೆ ತಲುಪಿದ್ದು, ಭಾರತದ ವಿರುದ್ಧ ಆಸ್ಟ್ರೇಲಿಯಾ ಟಾಸ್‌ ಗೆದ್ದು, ಬ್ಯಾಟಿಂಗ್‌ ಆಯ್ದುಕೊಂಡಿದೆ.

ವೆಸ್ಟ್ ಇಂಡೀಸ್‌ನ ಸೇಂಟ್ ಲೂಸಿಯಾದ ಡೇರೆನ್‌ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಹಣಾಹಣಿ ನಡೆಯುತ್ತಿದೆ. ಈ ಹಿಂದೆ ಭಾರತ ತನ್ನ ಮೊದಲ ಹಾಗೂ 2ನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆದರೆ ಆಸ್ಟ್ರೇಲಿಯಾ‌ ಅಫಘಾನಿಸ್ತಾನದ ವಿರುದ್ಧ ಸೋಲನುಭವಿಸಿದ್ದು, ಇಂದಿನ ಪಂದ್ಯ ಸೋತರೆ ಸೆಮಿಫೈನಲ್‌ನಿಂದ ಹೊರಬಿಳುವ ಸಾಧ್ಯತೆಯಿದೆ. ಹಾಗಾಗಿ ಇಂದಿನ ಪಂದ್ಯ ಆಸ್ಟ್ರೇಲಿಯಾಕ್ಕೆ ಅತ್ಯಂತ ಮಹತ್ವದ್ದಾಗಿದೆ. ಇತ್ತ ಭಾರತ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್‌ಗೆ ದಾಪುಗಾಲಿಡಲು ತವಕದಲ್ಲಿದೆ.

ಭಾರತ ಪರ:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್‌ ಕೀಪರ್‌), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ಪರ:
ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್‌ ಕೀಪರ್‌), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.

ಹೆಚ್ಚಿನ ಸುದ್ದಿ