Sunday, July 7, 2024
Homeಕ್ರೀಡೆT20 World Cup : ಅಫ್ಘಾನ್ ಔಟ್ : ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಆಫ್ರಿಕಾ 

T20 World Cup : ಅಫ್ಘಾನ್ ಔಟ್ : ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಆಫ್ರಿಕಾ 

ದಕ್ಷಿಣ ಆಫ್ರಿಕಾ ಭರ್ಜರಿ ಪ್ರದರ್ಶನ ನೀಡಿ ಇದೆ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್‌ ಫೈನಲ್‌ ಪ್ರವೇಶಿಸಿ ಇತಿಹಾಸ ನಿರ್ಮಿಸಿದೆ. ಗುರುವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಅಫ್ಘಾನಿಸ್ತಾನ ತಂಡವನ್ನು ಮಣಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದೆ.

ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿ ಎದುರಿಸುವಲ್ಲಿ ವಿಫಲವಾಗಿ 11.5 ಓವರ್‌ಗಳಲ್ಲಿ 56 ರನ್‌ಗಳಿಗೆ ಆಲೌಟ್ ಆಯಿತು.

ಈ ಅಲ್ಪ ಗುರಿಯನ್ನು ಬೆನ್ನಟ್ಟಿದ ಹರಿಣಗಳ ಪಡೆ ಕೇವಲ 8.5 ಓವರ್‌ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಇದು ಸೌತ್ ಆಫ್ರಿಕಾ ತಂಡದ ಮೊದಲ ಸೆಮಿಫೈನಲ್ ಗೆಲುವು ಎಂಬುದು ವಿಶೇಷ.

ಅಂದರೆ 1992 ರಿಂದ ವಿಶ್ವಕಪ್​ನಲ್ಲಿ ಕಣಕ್ಕಿಳಿಯುತ್ತಿರುವ ಆಫ್ರಿಕನ್ನರು ಒಮ್ಮೆಯೂ ಫೈನಲ್​ಗೆ ಪ್ರವೇಶಿಸಿರಲಿಲ್ಲ. ಇದೀಗ ಅಫ್ಘಾನಿಸ್ತಾನ್ ತಂಡವನ್ನು ಬಗ್ಗು ಬಡಿದು ಚೊಚ್ಚಲ ಬಾರಿ ಫೈನಲ್ ಸುತ್ತಿಗೆ ಪ್ರವೇಶಿಸಿದೆ.

ಹೆಚ್ಚಿನ ಸುದ್ದಿ