Sunday, November 10, 2024
Homeಟಾಪ್ ನ್ಯೂಸ್ರಾಹುಲ್ ಗಾಂಧಿಗೆ ಶಿಕ್ಷೆ ನೀಡಿದವನ ನಾಲಿಗೆ ಕತ್ತರಿಸುವೆ: ವೈರಲ್ ಆಯ್ತು ಹೇಳಿಕೆ

ರಾಹುಲ್ ಗಾಂಧಿಗೆ ಶಿಕ್ಷೆ ನೀಡಿದವನ ನಾಲಿಗೆ ಕತ್ತರಿಸುವೆ: ವೈರಲ್ ಆಯ್ತು ಹೇಳಿಕೆ

ದಿಂಡಿಗಲ್: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾರ್ವಜನಿಕ ಭಾಷಣ ಮಾಡುತ್ತಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿರುವ ಪ್ರಸಂಗ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ.

ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಕಾಂಗ್ರೆಸ್ ಮುಖಂಡ ಬಹಿರಂಗವಾಗಿ ಬೆದರಿಕೆ ಹಾಕಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಿಂಡಿಗಲ್ ಅಧ್ಯಕ್ಷ ಮಣಿಕಂದನ್ ಅವರು ನ್ಯಾಯಾಧೀಶರ ಹೆಸರು ಉಲ್ಲೇಖಿಸಿ, ನಾಲಿಗೆ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಮೋದಿ ಎಂಬ ನಾಮಧೇಯವನ್ನು ಅವಹೇಳನ ಮಾಡಿದ ಕಾರಣ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆ ರಾಹುಲ್ ಅವರ ಸಂಸತ್ತಿನ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು, ಎಸ್‌ಸಿ-ಎಸ್‌ಟಿ ಕಾಂಗ್ರೆಸ್ ಕಾರ್ಯಕರ್ತರು ದಿಂಡಿಗಲ್‌ನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಣಿಕಂದನ್ ಹೇಳಿಕೆ ನೀಡಿದ್ದಾರೆ.

ಮಾರ್ಚ್ 23ರಂದು ಸೂರತ್ ನ್ಯಾಯಾಲಯದ ನ್ಯಾಯಾಧೀಶರು ನಮ್ಮ ನಾಯಕ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ್ದಾರೆ ಎಂದು ಪ್ರಸ್ತಾಪಿಸಿದ ಮಣಿಕಂದನ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆ ತೀರ್ಪು ನೀಡಿದ ನ್ಯಾಯಾಧೀಶ ಎಚ್. ವರ್ಮಾ ಅವರ ನಾಲಿಗೆ ಕತ್ತರಿಸುವುದಾಗಿ ಹೇಳಿದ್ದಾರೆ.

ಅಣ್ಣಾ ಡಿಎಂಕೆ ಪಕ್ಷದ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊAಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹೆಚ್ಚಿನ ಸುದ್ದಿ

error: Content is protected !!