Sunday, July 7, 2024
Homeಕ್ರೀಡೆT20 WORLD CUP: ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ

T20 WORLD CUP: ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ

ವೆಸ್ಟ್‌ಇಂಡೀಸ್‌: ಟಿ20 ವಿಶ್ವಕಪ್ 2024 ರ ಸೂಪರ್-8 ಸುತ್ತಿನಲ್ಲಿ ಮೊದಲ ಪಂದ್ಯ ಆಡುತ್ತಿರುವ ಟೀಂ ಇಂಡಿಯಾದ (India) ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ (T20 World Cup 2024) ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಸೂಪರ್ 8 ಪಂದ್ಯ ನಡೆಯುತ್ತಿದೆ. ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ (David Johnson) ಅವರಿಗೆ ಸಂತಾಪ ಸೂಚಿಸುವ ಸಲುವಾಗಿ ಕಪ್ಪು ಪಟ್ಟಿ ಧರಿಸಿದ್ದಾರೆ.

ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ ಜಾನ್ಸನ್ ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಜಾನ್ಸನ್ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಇಂದು ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

1996 ರಲ್ಲಿ ಟೀಂ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ್ದ ಡೇವಿಡ್ ಜಾನ್ಸನ್ ಭಾರತದ ಪರ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇನ್ನು ದೇಶೀ ಕ್ರಿಕೆಟ್​ನಲ್ಲಿ ಕರ್ನಾಟಕ ಪರ ಅವರು 39 ಪ್ರಥಮ ದರ್ಜೆ ಪಂದ್ಯಗಳು ಮತ್ತು 33 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ.

ಹೆಚ್ಚಿನ ಸುದ್ದಿ