ನವದೆಹಲಿ: ವಿಚ್ಛೇದಿತ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ಮಗ ತಾಯಿಯೊಂದಿಗೆ ಇರಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.
ಡಿಸೆಂಬರ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಅತುಲ್ ಅವರ ನಾಲ್ಕು ವರ್ಷದ ಮಗನ ಪಾಲನೆಯ ಜವಾಬ್ದಾರಿಯನ್ನು ಆತನ ಪತ್ನಿ ನಿಕಿತಾ ಸಿಂಘಾನಿಯಾ ವಹಿಸಿಕೊಳ್ಳಲಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಕುಟುಂಬ ಸದಸ್ಯರು ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವನ್ನು ಎದುರಿಸುತ್ತಿದ್ದು, ಅವರನ್ನು ಬಂಧಿಸಿ ಜಾಮೀನು ನೀಡಿತ್ತು. ಪುತ್ರನನ್ನು ತಮ್ಮ ಸುಪರ್ದಿಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ವೀಡಿಯೊ ಲಿಂಕ್ ಮೂಲಕ ಮಗುವಿನೊಂದಿಗೆ ಮಾತನಾಡಿದ ಬಳಿಕ ತೀರ್ಪು ನೀಡಿದೆ.