Sunday, July 7, 2024
Homeಚುನಾವಣೆ 2023ASSEMBLY ELECTION: ಬಿಜೆಪಿಯ 10 ಸಂಸದರು ಸಂಸತ್ ಸ್ಥಾನಕ್ಕೆ ರಾಜೀನಾಮೆ

ASSEMBLY ELECTION: ಬಿಜೆಪಿಯ 10 ಸಂಸದರು ಸಂಸತ್ ಸ್ಥಾನಕ್ಕೆ ರಾಜೀನಾಮೆ

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ (bjp) ಹತ್ತು ಸಂಸದರು (mp) ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಪಂಚರಾಜ್ಯ (five state) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವ ಸಂಸದರಾದ ಮಧ್ಯಪ್ರದೇಶದ (madhyapradesh) ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಮತ್ತು ರಿತಿ ಪಾಠಕ್, ಛತ್ತೀಸ್‌ಗಢ (Chhattisgarh) ವಿಧಾನಸಭೆಗೆ ಆಯ್ಕೆಯಾದ ಅರುಣ್ ಸಾವೊ ಮತ್ತು ಗೋಮತಿ ಸಾಯಿ, ರಾಜಸ್ಥಾನ (rajasthan) ವಿಧಾನಸಭೆಗೆ ಆಯ್ಕೆಯಾದ ರಾಜ್ಯವರ್ಧನ್ ಸಿಂಗ್ ರಾಥೋಡ್, ದಿಯಾ ಕುಮಾರಿ ಮತ್ತು ಕಿರೋಡಿ ಲಾಲ್ ಮೀನಾ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ 21 ಸಂಸದರು ಸ್ಪರ್ಧಿಸಿದ್ದರು. ಇದರಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ತಲಾ ಏಳು, ಛತ್ತೀಸ್‌ಗಢದಲ್ಲಿ ನಾಲ್ವರು ಮತ್ತು ತೆಲಂಗಾಣದಲ್ಲಿ ಮೂವರು ಕಣಕ್ಕೆ ಇಳಿದಿದ್ದರು. ಚುನಾವಣೆಗೆ ಸ್ಪರ್ಧಿಸಿದ 21 ಸಂಸದರ ಪೈಕಿ 12 ಮಂದಿ ಜಯಗಳಿಸಿದ್ದು, ಒಂಬತ್ತು ಮಂದಿ ಸೋತಿದ್ದಾರೆ .

ಚುನಾವಣೆಯಲ್ಲಿ ಗೆದ್ದ ಹತ್ತು ಮಂದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (j.p. nedda) ಮತ್ತು ಪ್ರಧಾನಿ (PM) ನರೇಂದ್ರ ಮೋದಿ (narendra modi) ಅವರೊಂದಿಗಿನ ಸಭೆಯ ಬಳಿಕ ಅವರು ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಹೆಚ್ಚಿನ ಸುದ್ದಿ