Thursday, July 16, 2026
Homeಕ್ರೈಂROAD MISHAP: ಪಾಕ್ ನಿಂದ ಸ್ವದೇಶಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ - 22 ಆಫ್ಘಾನಿಗಳ ಸಾ*ವು!

ROAD MISHAP: ಪಾಕ್ ನಿಂದ ಸ್ವದೇಶಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ – 22 ಆಫ್ಘಾನಿಗಳ ಸಾ*ವು!

ಕಾಬೂಲ್: ಪಾಕಿಸ್ತಾನದಿಂದ (Pakistan) ತಮ್ಮ ಸ್ವದೇಶಕ್ಕೆ ಹಿಂತಿರುಗುತ್ತಿದ್ದ ಅಫ್ಘಾನ್ ನಿರಾಶ್ರಿತರಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಭೀಕರ ಘಟನೆ (Road Mishap) ಪೂರ್ವ ಅಫ್ಘಾನಿಸ್ತಾನದಲ್ಲಿ (Afghanistan) ಶನಿವಾರ ನಡೆದಿದೆ. ಈ ದುರ್ದೈವಿ ಘಟನೆಯಲ್ಲಿ ಕನಿಷ್ಠ 22 ಜನರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, 36ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರ ಪೈಕಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಂತೀಯ ಗವರ್ನರ್ ವಕ್ತಾರರಾದ ಅಬ್ದುಲ್ ಮಲಿಕ್ ನಿಯಾಜೈ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಈ ಅಪಘಾತವು ಲಘ್ಮನ್ ಪ್ರಾಂತ್ಯದ ಪ್ರಮುಖ ಹೆದ್ದಾರಿಯಲ್ಲಿ ಸಂಭವಿಸಿದೆ. ಈ ರಸ್ತೆಯು ರಾಜಧಾನಿ ಕಾಬೂಲ್ ಮತ್ತು ನಂಗರ್‌ಹಾರ್ ಪ್ರಾಂತ್ಯವನ್ನು ಸಂಪರ್ಕಿಸುತ್ತದೆ. ಮೃತಪಟ್ಟವರಲ್ಲಿ ಹತ್ತು ಮಕ್ಕಳು ಮತ್ತು ಐದು ಮಹಿಳೆಯರು ಸೇರಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗೆ ಸಿಲುಕಿದ್ದ ಜನರನ್ನು ಹೊರತೆಗೆಯಲು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಸಾಕಷ್ಟು ಶ್ರಮಿಸಬೇಕಾಯಿತು. ಗಾಯಗೊಂಡವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ನಂಗರ್‌ಹಾರ್‌ನಲ್ಲಿರುವ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸದ್ಯ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಅಮೆರಿಕದ ಮೇಲೆ ಸ್ಫೋಟಗೊಂಡ ಉಲ್ಕೆ – 300 ಟನ್ ಟಿಎನ್‌ಟಿ ತೀವ್ರತೆಗೆ ನಡುಗಿದ ಕಟ್ಟಡಗಳು!

ಹೆಚ್ಚಿನ ಸುದ್ದಿ

Change Language »
error: Content is protected !!