ವಾಷಿಂಗ್ಟನ್: ಅಮೆರಿಕದ ಪ್ರತಿಷ್ಠಿತ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿ ಟೆಸ್ಲಾ ಇದೀಗ ಭಾರತದಲ್ಲಿ ಕಂಪನಿ ಸ್ಥಾಪಿಸಲು ತಯಾರಿ ನಡೆಸುತ್ತಿದೆ. ಟೆಸ್ಲಾ ಅಧಿಕಾರಿಗಳು ಏಪ್ರಿಲ್‌ನಲ್ಲಿ ಭಾರತಕ್ಕೆ ಆಗಮಿಸಿ, ಯೋಜನೆಯ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಟೆಸ್ಲಾ ಅಧಿಕಾರಿಗಳು ಭಾರತಕ್ಕೆ ಆಗಮಿಸುವ ಸಂದರ್ಭ ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಗಳು ಹಾಗೂ ಪ್ರಮುಖ ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಭಾರತದಲ್ಲಿ ಟೆಸ್ಲಾ ಹೂಡಿಕೆ ಯೋಜನೆ, ಫ್ಯಾಕ್ಟರಿ ನಿರ್ಮಾಣದ ಸ್ಥಳ ಹಾಗೂ ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ತಯಾರಿಕೆಗೆ ಸಂಬಂಧಿಸಿದ ಸರ್ಕಾರಗಳ ನೀತಿಗಳ ಕುರಿತು ಚರ್ಚಿಸುವ ನಿರೀಕ್ಷೆ ಇದೆ ಎಂದು ವರದಿಗಳು ತಿಳಿಸಿವೆ.
ಇನ್ನು ಟೆಸ್ಲಾ ಕಂಪನಿ ಭಾರತದಲ್ಲಿ 3 ರಿಂದ 5 ಬಿಲಿಯನ್ ಡಾಲರ್ ವರೆಗೆ ಹೂಡಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಟೆಸ್ಲಾ ಸೇರಿದಂತೆ ವಿದೇಶಿ ವಿದ್ಯುತ್ ವಾಹನ ತಯಾರಿಕಾ ಕಂಪನಿಗಳು ಸುಂಕ ವಿನಾಯ್ತಿ ಪಡೆಯಲು ಯೋಜನೆಗೆ ಹೆಚ್ಚು ಒತ್ತು ನೀಡಲು ಸಹಕಾರಿಯಾಗಲಿದೆ ಎಂದು ವರದಿಯಾಗಿದೆ.