ಧಮ್ಕಿ ಹಾಕೋದು ಡಿಕೆಶಿ ಸಂಸ್ಕೃತಿ, ಹೊಡೆಯೋದು ಸಿದ್ದರಾಮಯ್ಯ ಸಂಸ್ಕೃತಿ ಎಂದು ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳಿಗೆ ಧಮ್ಕಿ ಹಾಕಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಷಿ, ಕಾಂಗ್ರೆಸ್ ಆರೋಪ ಬಾಲಿಶವಾಗಿದೆ. ಹಿಂದೂ ಸಂಸ್ಕೃತಿಯನ್ನು ಬಿಜೆಪಿ ಪಾಲಿಸಿಕೊಂಡು ಬಂದಿವೆ ಎಂದು ಹೇಳಿದ್ದಾರೆ.
ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿಗಳನ್ನು ರಾಜಕೀಯವಾಗಿ ಬಳಸಲು ಕಾಂಗ್ರೆಸ್ ಯೋಚಿಸಿತ್ತು, ಆದರೆ, ಬಿಜೆಪಿ ಸರ್ಕಾರ ಅದನ್ನು ಉಲ್ಟಾ ಮಾಡಿದೆ. ಡಿಕೆ ಶಿಯ ಗೂಂಡಾ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ. ಶ್ರೀಗಳಿಗೆ ಬೆದರಿಕೆ ಹಾಕಲಾಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶ್ರೀಗಳಿಗೆ ಅವಮಾನಿಸಿದೆ ಎಂದು ಅವರು ಹೇಳಿದರು.
ಮೀಸಲಾತಿಯನ್ನು ಒಪ್ಪುವಂತೆ ಶ್ರೀಗಳಿಗೆ ಸಿಎಂ ಬೊಮ್ಮಾಯಿ 25 ಬಾರಿ ಕರೆ ಮಾಡಿ ಒತ್ತಡ ಹೇರಿದ್ದರು ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದರು. ಅದಾಗ್ಯೂ ಬಸವಜಯ ಮೃತ್ಯುಂಜಯ ಸ್ವಾಮಿಗಳು ಈ ಆರೋಪವನ್ನು ನಿರಾಕರಿಸಿದ್ದರು.