Saturday, January 25, 2025
Homeರಾಜ್ಯರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆಯಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರೆಯಲಿದೆ.

ಭಾರತದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಹೇಳಿದೆ. ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್, ಮುಂಬರುವ ಮಾನ್ಸೂನ್ ನಲ್ಲಿ ಸಾಮಾನ್ಯ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಲಿದ್ದು, ಶೇ. 94 ರಷ್ಟು ಮಳೆಯಾಗಲಿದೆ ಎಂದು ಹೇಳಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ದೀರ್ಘಾವಧಿಯಲ್ಲಿ ದೀರ್ಘಾವಧಿಯ ಸರಾಸರಿ (ಎಲ್‌ಪಿಎ) 868.6 ಮಿಮೀ ಮಳೆಯಾಗಲಿದೆ ಎಂದು ಹೇಳಿದೆ.

ಹೆಚ್ಚಿನ ಸುದ್ದಿ

error: Content is protected !!