ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ.
ಇಂದು ಸಂಜೆ ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ 6.5 ತೀವ್ರತೆಯ ಭೂಕಂಪನ ಸಂಭವಿಸಿದ ಹಲವಾರು ಸೆಕೆಂಡುಗಳಲ್ಲಿ ಉತ್ತರ ಭಾರತದ ಹಲವು ಭಾಗದಲ್ಲೂ ಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ತುರ್ಕಮೆನಿಸ್ತಾನ್, ಭಾರತ, ಕಝಾಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ಹಲವು ದೇಶಗಳಲ್ಲಿ ಭೂಕಂಪನ ನಡೆದಿದೆ.