ತುಮಕೂರು: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಂಡಿದ್ದಲ್ಲದೆ ಅವರು ಮುಂದಿನ 6 ವರ್ಷಗಳ ಕಾಲ ಚುನಾವಣೆಗಳಲ್ಲಿ ಭಾಗವಹಿಸದಂತೆ ತಡೆಯಲಾಗಿದೆ
ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಸುರೇಶ್ ಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ಭಾಗಶಃ ಮಾನ್ಯ ಮಾಡಿದೆ.
ಮತದಾರರಿಗೆ ನಕಲಿ ಬಾಂಡ್ ಹಂಚಿ ಆಮಿಷವೊಡ್ಡಿದ ಪುಕರಣದದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್‌ರವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿದೆ.
2018ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ತುಮಕೂರು ಗ್ರಾಮಾಂತರ ಕ್ಷೇತ್ರದ 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂದು ಗೌರಿಶಂಕರ್ ವಿರುದ್ಧ ಬಿಜೆಪಿಯ ಮಾಜಿ ಶಾಸಕ ಸುರೇಶ್‌ಗೌಡರವರು ದೂರು ದಾಖಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠ ಅವರ ಆಯ್ಕೆ ಅಸಿಂಧು ಎಂದು ತೀರ್ಪು ನೀಡಿದೆ.
2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಗೌರಿ ಶಂಕರ್ ಅವರಿಗೇ ಟಿಕೆಟ್ ಘೋಷಿಸಿದೆ. ಅವರೂ ಸಹ ಪಂಚರತ್ನ ಯಾತ್ರೆ ಸೇರಿದಂತೆ ಭರ್ಜರಿ ಚುನಾವಣೆ ತಯಾರಿ ನಡೆಸಿದ್ದರು. ಈಗ ಅನರ್ಹಗೊಂಡಿರುವುದರಿಂದ ಅವರು ಮತ್ತೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.