Wednesday, February 19, 2025
Homeದೇಶಅದಾನಿ ಕುರಿತ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲು ಮುಂದಾದ ಅಸ್ಸಾಂ ಸಿಎಂ

ಅದಾನಿ ಕುರಿತ ಟ್ವೀಟ್: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲು ಮುಂದಾದ ಅಸ್ಸಾಂ ಸಿಎಂ

ಅಸ್ಸಾಂ: ಅದಾನಿ ಕುರಿತು ಟ್ವೀಟ್ ನಲ್ಲಿ ತಮ್ಮನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ನಾಯಕನ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ದೂರು ದಾಖಲಿಸುವುದಾಗಿ ಹೇಳಿದ್ದಾರೆ.

ಏ.14 ರಂದು ಪ್ರಧಾನಿ ಮೋದಿ ಗುವಾಹಟಿಗೆ ಭೇಟಿ ನೀಡಿದ ಬಳಿಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. ರಾಹುಲ್ ಗಾಂಧಿ ಟ್ವೀಟ್ ಮಾಡಿರುವುದು ಮಾನಹಾನಿಕರವಾಗಿದೆ. ಪ್ರಧಾನಿ ಮೋದಿ ಭೇಟಿ ಬಳಿಕ ರಾಹುಲ್ ಗಾಂಧಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡುವುದಾಗಿ ಶರ್ಮಾ ತಿಳಿಸಿದ್ದಾರೆ. 

ಅದಾನಿ ವಿಷಯವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ, ಈ ವಿಚಾರವನ್ನು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ನಾಯಕರ ವಿರುದ್ಧ ವಾಗ್ದಾಳಿ ನಡೆಸುವುದಕ್ಕೂ ಬಳಸಿಕೊಂಡಿದ್ದರು ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!