ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಹೋಳಿ ಸಂಭ್ರಮದಲ್ಲಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಒಂಟೆಯ ಮೇಲೆ ಸವಾರಿ ಮಾಡಿ ಗಮನ ಸೆಳೆದರು. ಜನರೊಂದಿಗೆ ಬೆರೆತು ಹೋಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಬಿಜೆಪಿಯ ಹಲವಾರು ನಾಯಕರು ಹೋಳಿ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಹೋಳಿಯ ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸುವಂತೆ ಸಂಗೀತ, ನೃತ್ಯ ಕಾರ್ಯಕ್ರಮಗಳು ನಡೆದವು. ಎಲ್ಲೆಡೆ ಸೌಹಾರ್ದತೆ ಮನೆ ಮಾಡಿತ್ತು.
Uttar Pradesh DCM Brajesh Pathak rode a camel to Holi celebrations in Lucknow. pic.twitter.com/Hlrm27NenD
— News Arena India (@NewsArenaIndia) March 14, 2025
ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಪಾಠಕ್, ರಾಜ್ಯದ ಜನರಿಗೆ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. “ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು. ಈ ಹಬ್ಬವನ್ನು ಎಲ್ಲರೂ ಬಹಳ ಉತ್ಸಾಹದಿಂದ ಆಚರಿಸುತ್ತಿದ್ದಾರೆ. ಈ ಸಮಯದಲ್ಲಿ ರಂಜಾನ್ ತಿಂಗಳು ಕೂಡ ಬಂದಿದೆ. ನಾವೆಲ್ಲರೂ ಒಟ್ಟಾಗಿ ಹಬ್ಬಗಳನ್ನು ಆಚರಿಸುತ್ತಿದ್ದೇವೆ. ಉತ್ತರ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯುವುದಿಲ್ಲ. ಇಲ್ಲಿ ಎಲ್ಲವೂ ಶಾಂತಿಯುತವಾಗಿದೆ” ಎಂದು ಹೇಳಿದರು.