Monday, November 4, 2024
Homeಚುನಾವಣೆ 2023ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ: ವಿ ಸೋಮಣ್ಣ ಹೇಳಿದ್ದೇನು?

ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ: ವಿ ಸೋಮಣ್ಣ ಹೇಳಿದ್ದೇನು?

ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸಚಿವ ವಿ. ಸೋಮಣ್ಣ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ. ವರುಣಾದಲ್ಲಿ ಸ್ಪರ್ಧಿಸುವ ಮಾತೇ ಇಲ್ಲ ಎಂದು ಅವರು ಹೇಳಿದ್ದಾರೆ.

ನಾನು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ,  ನಾನು ಕೇಳಿರೋದು ಚಾಮರಾಜನಗರ, ಗೋವಿಂದರಾಜನಗರ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಚಾಮರಾಜನಗರ ಅಥವಾ ಗೋವಿಂದರಾಜನಗರ ಈ ಎರಡು ಕ್ಷೇತ್ರದಲ್ಲಿ ಒಂದನ್ನು ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇದು ಹೈಕಮಾಂಡ್‍ಗೆ ಕೂಡ ಗೊತ್ತಿದೆ ಎಂದು ಸೋಮಣ್ಣ ಹೇಳಿದ್ದಾರೆ.

ವರುಣಾದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ವರುಣದಲ್ಲಿ ಸ್ಪರ್ಧಿಸುತ್ತೇನೆಂದು ಯಾರು ಹೇಳಿದ್ದು, ಆ ರೀತಿ ಯಾವುದು ಇಲ್ಲ. ನಮ್ಮ ಪಕ್ಷದ ವರಿಷ್ಠರಿಗೆ ಇದು ಒಂದು ರೀತಿ ಪ್ರತಿಷ್ಠಿತ ಚುನಾವಣೆ. ಯಾರನ್ನು ಎಲ್ಲಿ ಕಣಕ್ಕಿಳಿಸಬೇಕು ಎಂಬುದು ವರಿಷ್ಠರಿಗೆ ಬಿಟ್ಟಿದ್ದು. ಇನ್ನೊಂದು ಗಂಟೆಯಲ್ಲಿ ಎಲ್ಲದಕ್ಕೂ ಉತ್ತರ ಸಿಗುತ್ತೆ ಎಂದು ಹೇಳಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಸಜ್ಜಾಗಿದ್ದು, ವಿ ಸೋಮಣ್ಣ ಸಿದ್ದರಾಮಯ್ಯ ಎದುರು ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿದ್ದವು. ವರುಣಾದಲ್ಲಿ ಸಿದ್ದರಾಮಯ್ಯ ಪರ ಸ್ಪಷ್ಟ ಅಲೆ ಇದ್ದು, ಯಾವುದೇ ಬಿಜೆಪಿ ನಾಯಕರೂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಮುಂದೆ ಬರುತ್ತಿಲ್ಲ ಎನ್ನಲಾಗಿದೆ.

ಹೆಚ್ಚಿನ ಸುದ್ದಿ

error: Content is protected !!