Sunday, July 7, 2024
HomeಬೆಂಗಳೂರುValmiki corporation: ವಾಲ್ಮೀಕಿ ನಿಗಮ ಹಗರಣ - ಇಂದು ಸಿಎಂ ನಿವಾಸಕ್ಕೆ ಬಿಜೆಪಿ ಮುತ್ತಿಗೆ!

Valmiki corporation: ವಾಲ್ಮೀಕಿ ನಿಗಮ ಹಗರಣ – ಇಂದು ಸಿಎಂ ನಿವಾಸಕ್ಕೆ ಬಿಜೆಪಿ ಮುತ್ತಿಗೆ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ 187 ಕೋಟಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ.

ಈ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಜನ ವಿರೋಧಿ ಭ್ರಷ್ಟ ಕಾಂಗ್ರೆಸ್‌ ಸರಕಾರ ಶೀರ್ಷಿಕೆ ಅಡಿಯಲ್ಲಿ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರಿಂದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ರಾಜ್ಯಾಧ್ಯಕ ಬಿವೈ ವಿಜಯೇಂದ್ರ ಕರೆ ನೀಡಿದ್ದಾರೆ.

ಈ ಹಗರಣದ ಹಿಂದೆ ಸಿಎಂ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಸಿಎಂ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ.

ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರ ಬಂದಿದೆ. ಈಗ ಇದನ್ನು ಮುಚ್ಚಿ ಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಬಿಜೆಪಿ ಹೇಳುತ್ತಿದೆ.

ಹೆಚ್ಚಿನ ಸುದ್ದಿ