Friday, March 21, 2025
Homeಟಾಪ್ ನ್ಯೂಸ್ರಾಮನವಮಿ ಆಚರಣೆ ವೇಳೆ ಹಿಂಸಾಚಾರ: ವಾಹನಗಳಿಗೆ ಬೆಂಕಿ

ರಾಮನವಮಿ ಆಚರಣೆ ವೇಳೆ ಹಿಂಸಾಚಾರ: ವಾಹನಗಳಿಗೆ ಬೆಂಕಿ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಮನವಮಿ ಮೆರವಣಿಗೆ ವೇಳೆ ಗಲಾಟೆ ನಡೆದಿದೆ. ಮೆರವಣಿಗೆ ವೇಳೆ ಹಿಂಸಾಚಾರ ಭುಗಿಲೆದ್ದ ಕಾರಣ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ರಾಮನವಮಿಯನ್ನು ಶಾಂತಿಯುತವಾಗಿ ಆಚರಿಸಲು ಮತ್ತು ಮೆರವಣಿಗೆಗಳನ್ನು ಕೈಗೊಳ್ಳುವಾಗ ಯಾವುದೇ ರೀತಿಯ ಹಿಂಸಾಚಾರದಿಂದ ದೂರವಿರಿ ಎಂದು ರಾಜ್ಯದ ಜನರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂದೇಶ ನೀಡಿದ್ದರೂ ಹಿಂಸಾಚಾರ ನಡೆದಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗುದೆ

ಹಿಂದೂಪರ ಸಂಘಟನೆಗಳು ಇಂದು ಪಶ್ಚಿಮ ಬಂಗಾಳದಲ್ಲಿ ಅದ್ಧೂರಿ ರಾಮನವಮಿ ಆಚರಣೆ ನಡೆಸುತ್ತಿತ್ತು. ಇದಕ್ಕೂ ಮುನ್ನ ಶಾಂತಿಯುತ ರಾಮನವಮಿ ಆಚರಣೆ ಮಾಡಿ, ಲಾಠಿ, ತಲವಾರ್‌ಗಳನ್ನು ಹಿಡಿದು ಮೆರವಣಿಗೆ ಮಾಡೋದಾಗಿ ಬಿಜೆಪಿಗರು ಹೇಳುತ್ತಿದ್ದಾರೆ. ಯಾವುದೇ ಪ್ರಚೋದನೆಗೆ ಒಳಗಾಗಬೇಡಿ ಎಂದು ಸಿಎಂ ಮಮತಾ ಬ್ಯಾನರ್ಜಿ ಜನರಲ್ಲಿ ಮನವಿ ಮಾಡಿದ್ದರು. ಹೀಗಿದ್ದರೂ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ಭುಗಿಲೆದ್ದಿದೆ.

ಹೆಚ್ಚಿನ ಸುದ್ದಿ

error: Content is protected !!