ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ವೈಮಾನಿಕ ವಿಡಿಯೊವನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಹಂಚಿಕೊಂಡಿದ್ದಾರೆ.
ಸುಮಾರು 3000 ಶಿವ ಸೈನಿಕರು, ಪಕ್ಷದ ಸಂಸದರು, ಸಚಿವರು, ಶಾಸಕರು ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಜೊತೆಗೆ ಫಡ್ನವೀಸ್ ಅಯೋಧ್ಯೆಗೆ ಭೇಟಿ ನೀಡಿದ್ದಾರೆ
ಹೆಲಿಕಾಪ್ಟರ್ ನಲ್ಲಿ ಹೋಗುತ್ತಿದ್ದಾಗ ಫಡ್ನವೀಸ್ ಈ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ. ಇದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಅವರು, “ಇದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ” ಎಂದು ಬರೆದಿದ್ದಾರೆ.