Saturday, March 15, 2025
Homeಕ್ರೈಂBIG BREAKING : ಉಪಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ - ಸ್ಥಿತಿ ಗಂಭೀರ

BIG BREAKING : ಉಪಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ – ಸ್ಥಿತಿ ಗಂಭೀರ

ಚಿತ್ರದುರ್ಗ : ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಅಪಘಾತಕ್ಕೀಡಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲೆಯ ಹಿರಿಯೂರ ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಲಮಾಣಿ ಅವರಿಗೆ ಸ್ಕೂಟರ್ ಡಿಕ್ಕಿಯಾಗಿದ್ದು, ಗಂಭೀರಗವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯ, ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಲಮಾಣಿ ಅವರು ಇಳಿದಾಗ ಅದೇ ವೇಳೆ ಬಂದಂತಹ ಸ್ಕೂಟರ್ ಡಿಕ್ಕಿ ಹೊಡೆದಿದೆ. ಆಗ ಅವರ ತಲೆ, ಕೈ, ಕಾಲುಗಳಿಗೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ.
ಕೂಡಲೇ ಲಮಾಣಿ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಸುದ್ದಿ

error: Content is protected !!