ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.
ಲಿಂಗಾಯತ ಸಮುದಾಯದವರಾದ ಬಸವರಾಜ್ ಬೊಮ್ಮಾಯಿ ವಿರುದ್ಧ ಅದೇ ಸಮುದಾಯದ ಪ್ರಬಲ ನಾಯಕನ್ನು ಕಣಕ್ಕಿಳಿಸಿ ಬಿಜೆಪಿ ಮುಖ್ಯಮಂತ್ರಿಯಾಗಿದ್ದವರನ್ನೇ ಸೋಲಿಸುವ ತಂತ್ರ ರೂಪಿಸಿದೆ. ಇಂದು ದೆಹಲಿಯಲ್ಲಿ ನಡೆದ ಚುನಾವಣಾ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ವಿನಯ್ ಕುಲಕರ್ಣಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು., ಬಿಜೆಪಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಕುಲಕರ್ಣಿ ಕಣಕ್ಕಿಳಿಯೋದು ಖಚಿತವಾಗಿದೆ. ಕಳೆದ ಬಾರಿ ಧಾರವಾಡ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕುಲಕರ್ಣಿ ಈ ಬಾರಿ ಕ್ಷೇತ್ರ ಬದಲಾಯಿಸಿ ಬಿಜೆಪಿಗೆ ಉತ್ತರ ನೀಡಲು ಮುಂದಾಗಿದ್ದಾರೆ
ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ವಿನಯ್ ಕುಲಕರ್ಣಿ ಜಾಮೀನಿಗಾಗಿ ಹರಸಾಹಸಪಟ್ಟಿದ್ರು. ತನ್ನನ್ನು ಬಂಧಿಸಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ರು. ಸಮಯ ಬಂದಾಗ ಬಿಜೆಪಿಯ ಎಲ್ಲಾ ನಡವಳಿಕೆಗೆ ಉತ್ತರ ಕೊಡುತ್ತೇನೆ ಎಂದಿದ್ದ ವಿನಯ್ ಕುಲಕರ್ಣಿ ಇದೀಗ ಚುನಾವಣೆಯ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.