ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಚುನಾವಣಾ ನೀತಿ ಸಂಹಿತೆ ಕಂಟಕವಾಗಿದೆ. ಕುಮಾರಸ್ವಾಮಿ ತಮ್ಮ ನಿವಾಸದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಚೆಕ್ ವಿತರಿಸಿ ವಿವಾದ ಸೃಷ್ಟಿಸಿಕೊಂಡಿದ್ದಾರೆ.
ಒಮ್ಮೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಸರ್ಕಾರಿ ಕಾರ್ಯಕ್ರಮವನ್ನು ಮಾಡಬಾರದೆಂಬ ನಿಯಮವಿದ್ದರೂ ಶಾಸಕ ಕುಮಾರಸ್ವಾಮಿ ಅದನ್ನು ಮೀರಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಸದ್ಯ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ಎಂ.ಪಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.
ನೂರಾರು ಮಹಿಳೆಯನ್ನ ಸೇರಿಸಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಚೆಕ್ ವಿತರಣೆ ಮಾಡಿದ್ದಾರೆ. ಮಹಿಳಾ ಸಂಘಟನೆಗಳಿಗೆ ಸರ್ಕಾರಿ ಅನುದಾನದ ಚೆಕ್ ವಿತರಣೆ ಮಾಡಿದ್ದಾರೆ ಎನ್ನಲಾಗಿದೆ.
ಮೂಡಿಗೆರೆ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಅವರು ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಾರೆ. ಮಾಹಿತಿ ತಿಳಿದು ಶಾಸಕರ ನಿವಾಸಕ್ಕೆ ಧಾವಿಸಿದ ಚುನಾವಣಾ ಅಧಿಕಾರಿಗಳು ಕಾರ್ಯಕ್ರಮವನ್ನ ಅರ್ಧಕ್ಕೆ ನಿಲ್ಲಿಸಿದ್ದಾರೆ.