Sunday, July 7, 2024
Homeಟಾಪ್ ನ್ಯೂಸ್IMRAN KHAN: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನಕ್ಕೆ ವಿಶ್ವಸಂಸ್ಥೆ ಅಸಮಧಾನ!

IMRAN KHAN: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನಕ್ಕೆ ವಿಶ್ವಸಂಸ್ಥೆ ಅಸಮಧಾನ!

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿರುವುದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆ ಸೂಚಿಸಿದೆ.

ಪಾಕಿಸ್ತಾನ ತಾರೀಖ್-ಇ- ಇನ್ಸಾಫ್ ಪಕ್ಷದ ಮುಖ್ಯಸ್ಥರೂ ಆಗಿರುವ ಇಮ್ರಾನ್ ಖಾನ್ ವಿರುದ್ಧ 150ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಕಳೆದ ಒಂದು ವರ್ಷದಿಂದ ಜೈಲಿನಲ್ಲಿದ್ದಾರೆ.

ಉಡುಗೊರೆಯಾಗಿ ಬಂದ ವಸ್ತುಗಳು ಸೇರಿದಂತೆ ಸರ್ಕಾರಿ ಸ್ವತ್ತುಗಳನ್ನು ಮಾರಾಟ ಮಾಡಿರುವುದು ಸೇರಿದಂತೆ 71 ವರ್ಷದ ಇಮ್ರಾನ್ ಖಾನ್ ವಿರುದ್ಧ ಹಲವು ಪ್ರಕರಣಗಳನ್ನು ಪಾಕಿಸ್ತಾನ ಸರ್ಕಾರವೇ ದಾಖಲಿಸಿದೆ.

2023 ಆಗಸ್ಟ್ ನಿಂದ ಜೈಲುವಾಸಿರುವ ಇಮ್ರಾನ್ ಖಾನ್ ಅವರನ್ನು ಕಳೆದ ಸರ್ವತ್ರಿಕ ಚುನಾವಣೆಯಲ್ಲೂ ಪಾಲ್ಗೊಳ್ಳದಂತೆ ತಡೆ ವಿಧಿಸಲಾಗಿತ್ತು.

ವಿಶ್ವಸಂಸ್ಥೆ ಕಾರ್ಯಕಾರಿ ಸಮಿತಿ ಉಡುಗೊರೆಗಳನ್ನು ಮಾರಾಟ ಮಾಡಿದ್ದಕ್ಕಿಂತ ಅವರು ದೇಶಕ್ಕಾಗಿ ಸಲ್ಲಿಸಿದ ಸೇವೆ ದೊಡ್ಡದಿದೆ. ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸಿ ಜೈಲಿಗೆ ಹಾಕುವುದು ಸರಿಯಾದ ಕ್ರಮವಲ್ಲ. ಇದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದೆ.

ಹೆಚ್ಚಿನ ಸುದ್ದಿ