ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ನಡೆದ ರಾಮನವಮಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ನಡೆದು, ಹಿಂಚಾಚಾರ ಭುಗಿಲೆದ್ದಿತ್ತು. 3 ದಿನದ ಗಲಭೆಯ ನಂತರ ಇದೀಗ ಹೌರಾ ಪರಿಸ್ಥಿತಿ ಶಾಂತವಾಗಿದೆ
ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಮನವಮಿಯ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಭಾನುವಾರ ನಡೆದ ರಾಮನವಮಿ ಶೋಭಾಯಾತ್ರೆ ವೇಳೆ ಕಲ್ಲೂ ತೂರಾಟ ನಡೆದು ಹಿಂಸಾಚಾರ ಭುಗಿಲೆದ್ದಿತ್ತು. ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರಿಗೂ ಗಾಯಗಳಾಗಿದ್ದವು. ಪರಿಸ್ಥಿತಿ ಹತೋಟಿಗೆ ಬಂದಿದ್ದು, ಬೆಳಿಗ್ಗೆಯಿಂದಲೇ ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿದೆ. ಅಂಗಡಿಗಳು ಮತ್ತು ಮಾರುಕಟ್ಟೆಗಳಲ್ಲಿ ಎಂದಿನಂತೆ ವ್ಯಾಪಾರ, ವಹಿವಾಟು ಪುನರಾರಂಭವಾಗಿದೆ. ಹೌರಾದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂಸಾಚಾರದ ಹಿಂದೆ ಬಿಜೆಪಿ ಮತ್ತು ಇತರ ಬಲಪಂಥೀಯ ಗುಂಪುಗಳಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಈ ಆರೋಪ ತಳ್ಳಿಹಾಕಿರುವ ಬಿಜೆಪಿ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಯಿಂದ (ಎನ್‌ಐಎ) ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.