Wednesday, November 13, 2024
Homeಚುನಾವಣೆ 2023ಮಾಜಿ ಡಿಸಿಎಂ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ

ಮಾಜಿ ಡಿಸಿಎಂ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ

ತುಮಕೂರು: ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಸ್ವಕ್ಷೇತ್ರದಲ್ಲಿ ಬರೋಬರೀ 13 ಗ್ರಾಮಗಳ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.

2016ರಲ್ಲಿ ಸುಧಾಕರ್ ಲಾಲ್ ಶಾಸಕರಾಗಿದ್ದಾಗ ಮಂಜೂರಾಗಿರೋ ಶ್ರೀ ಧನಲಕ್ಷ್ಮಿ ಸ್ಟೋನ್ ಮಾಲೀಕತ್ವದ ಕ್ರಷರ್ ತೆರೆಯದಂತೆ ಗ್ರಾಮಸ್ಥರು ಅಧಿಕಾರಿಗಳು ಮನವಿಗೆ ಮಾನ್ಯತೆ ನೀಡದ ಹಿನ್ನೆಲೆಯಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಅಧಿಕಾರಿಗಳ ನಡೆಗೆ ಬೇಸತ್ತ ತುಮಕೂರು ತಾಲೂಕು ವ್ಯಾಪ್ತಿಯ ಬೆಳಧರ ಗ್ರಾಪಂ ವ್ಯಾಪ್ತಿಯ ಚಿನಿವಾರನಹಳ್ಳಿ, ಜಕ್ಕೆನಹಳ್ಳಿ, ಅನ್ನದಾನಿಪಾಳ್ಯ, ಸೀಗೇಹಳ್ಳ, ಗೌಡನಕಟ್ಟೆ, ಮಲ್ಲಯ್ಯನಪಾಳ್ಯ, ಚನ್ನಮುದ್ದನಹಳ್ಳಿ, ಮಸಣಿಪಾಳ್ಯ,ಅಹೋಬಲ ಅಗ್ರಹಾರ, ಹಿರೇಕೊಡತಕಲ್ಲು, ಮುದ್ದರಾಮಯ್ಯನಪಾಳ್ಯ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.

ಪ್ರತಿ ಗ್ರಾಮದಲ್ಲೂ ಫ್ಲೆಕ್ಸ್ ಹಾಕಿ 13 ಹಳ್ಳಿಯ ಒಟ್ಟು 5000ಕ್ಕೂ ಹೆಚ್ಚು ಮತದಾರರು ಮತದಾನ ಬಹಿಷ್ಕರಿಸಿದ್ದು, ಕ್ರಷರ್ ಅನುಮತಿ ರದ್ದಾಗುವವರೆಗೆ ಮತದಾನ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!