ಮೀಸಲಾತಿ ವಿಚಾರದಲ್ಲಿ ಅನಗತ್ಯ ಗೊಂದಲ ಉಂಟಾಗಿದೆ, ಮುಸ್ಲಿಂ ಬಾಂಧವರಿಗೆ ನಾವು ಅನ್ಯಾಯ ಮಾಡಿಲ್ಲ ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿದ್ದಾರೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡೋಕೆ ಸಾಧ್ಯ ಇಲ್ಲ ಎಂದು ಅವರನ್ನು EWS ಅಡಿ ತಂದಿದ್ದೇವೆ, ಈ ಬಗ್ಗೆ ತಪ್ಪು ಗ್ರಹಿಕೆ ಬೇಡ ಎಂದು ಬಿಎಸ್‌ವೈ ಹೇಳಿದ್ದಾರೆ.
ಒಂದೆರಡು ಕಡೆ ಬಿಟ್ಟರೆ ಉಳಿದೆಲ್ಲೆಡೆ ಮೀಸಲಾತಿ ಬದಲಾವಣೆಗೆ ಉತ್ತಮ ಬೆಂಬಲ ಸಿಕ್ಕಿದೆ. ಮೀಸಲಾತಿ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ನಾವು ಮನವರಿಕೆ ಮಾಡಿಕೊಡುತ್ತೇವೆ, ಎಂದಿದ್ದಾರೆ.
ಮುಸ್ಲಿಮರ ಮೀಸಲಾತಿಯನ್ನು ಮರಳಿ ತರುತ್ತೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್‌ವೈ, ಮೀಸಲಾತಿಯನ್ನು ಸರಿ ಪಡಿಸುತ್ತೇವೆ ಎಂದು ಕಾಂಗ್ರೆಸ್ ಮಾತಾಡಬೇಕಿಲ್ಲ, ಅಧಿಕಾರಕ್ಕೆ ಬರದವರು ಸುಮ್ಮನೆ ಆಸೆ ಹುಟ್ಟಿಸಬಾರದು, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿ ಅವರ ಸ್ಥಾನ ಯಾವುದು ಇರಬೇಕೆನ್ನುವುದು ಚರ್ಚೆ ಮಾಡಲಿ ಎಂದು ಹೇಳಿದರು.