ಬೆಂಗಳೂರು: ಮೇ ೧೦ರಂದು ನಿಗದಿಯಾಗಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದೆ. ಗೆಲುವಿನ ಕುರಿತು ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಈ ಬಾರಿ ಸಮ್ಮಿಶ್ರ ಸರ್ಕಾರ ಬರಲ್ಲ.. ನಾವೇ ಬಹುಮತ ಸಾಧಿಸುತ್ತೇವೆ ಎಂದು ಹೇಳಿದ್ದಾರೆ.
ಈಗಾಗಲೇ ಎಲ್ಲರಿಗಿಂತ ಮೊದಲು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್, ಗೆಲುವಿಗಾಗಿ ಭಾರೀ ಕಸರತ್ತು ಮಾಡುತ್ತಿವೆ. ಈಗಾಗಲೇ ಎರಡು ಬಾರಿ ಸಮ್ಮಿಶ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸಿದ್ದ ಜೆಡಿಎಸ್ ಇದೀಗ ಬಹುಮತದ ವಿಶ್ವಾಸದಲ್ಲಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಾರಿ ಸಮ್ಮಿಶ್ರ ಸರ್ಕಾರ ಬರಲ್ಲ.. ನಾವೇ ಬಹುಮತ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ, ಎರಡು ರಾಷ್ಟ್ರೀಯ ಪಕ್ಷಗಳ ನಾಯಕರ ಹುಬ್ಬೇರುವಂತೆ ಮಾಡಿತ್ತು. ಇದೀಗ ಜೆಡಿಎಸ್ ಪಕ್ಷದ ಎರಡನೇ ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ತೀವ್ರ ಕುತೂಹಲ ಕೆರಳಿಸಿರುವ ಜೆಡಿಎಸ್ ಎರಡನೇ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಇಂದು ಹುಬ್ಬಳ್ಳಿ ಮತ್ತು ಹಳಿಯಾಲದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ.