Sunday, January 25, 2026
Homeಟಾಪ್ ನ್ಯೂಸ್WEATHER UPDATE : ರಾಜ್ಯದಲ್ಲಿ ಥಂಡಿ ಶೀತದ ವಾತಾವರಣ - ತುಂತುರು ಮಳೆ ಸಂಭವ!

WEATHER UPDATE : ರಾಜ್ಯದಲ್ಲಿ ಥಂಡಿ ಶೀತದ ವಾತಾವರಣ – ತುಂತುರು ಮಳೆ ಸಂಭವ!

ಬೆಂಗಳೂರು : ಕಳೆದ ಮೂರು ದಿನಗಳಿಂದ ಮೈಕೊರೆಯುವ ರಣಚಳಿಗೆ (Cold) ಕರುನಾಡಿನ (Karnataka) ಜನರು ತತ್ತರಿಸಿಹೋಗಿದ್ದು, ಶೀತಗಾಳಿಯ ಭೀಕರತೆ ಹೆಚ್ಚಾಗಿದೆ.

ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ನಡುವೆ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದ್ದು, ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆ ಕೂಡ ಇದೆ.

ಹಾಗೆಯೇ ದಾವಣಗೆರೆ, ಹಾವೇರಿ,ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮುಂದಿನ 24 ರಿಂದ 48 ಗಂಟೆಯವರೆಗೆ ಇದೇ ತಾಪಮಾನ ಮುಂದುವರೆಯಲಿದ್ದು, ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ಎಚ್ಚರಿಕೆಯಿಂದ ಇರುವಂತೆ ಕಠಿಣ ಸೂಚನೆ ಹೊರಡಿಸಲಾಗಿದೆ.

ಇನ್ನುಳಿದಂತೆ ಜ. 10 ಹಾಗೂ 11 ರಂದು ಬೆಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಸೇರಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.ಲ್ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ : ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಕೊ*ಲೆ ಬೆದರಿಕೆ! 

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!