Monday, May 18, 2026
Homeಟಾಪ್ ನ್ಯೂಸ್ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಚಿಕ್ಕ ಮಕ್ಕಳು ಚಾಕೋಲೆಟ್ ಗಾಗಿ ಹಟ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಎರಡು ಮಕ್ಕಳ ತಾಯಿ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌ (30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 6 ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ನಂದಿನಿ ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದರೆ ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ, ಫೋನ್ ಮಾಡಿದ್ದರೂ ಸ್ವೀಕರಿಸದ ಕಾರಣ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಬಳಿಕ ಪತಿ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿರುವುದು ತಿಳಿದುಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ನಂದಿನಿ ಮೃತಪಟ್ಟಿದ್ದಳು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ತನಿಖೆ ಬಳಿಕ ನಂದಿನಿ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿದುಬರಲಿದೆ.

ಹೆಚ್ಚಿನ ಸುದ್ದಿ

Change Language »
error: Content is protected !!