Monday, May 18, 2026
Homeಟಾಪ್ ನ್ಯೂಸ್ಚುನಾವಣೆ ಮುಗಿಯುವವರೆಗೆ ಸುದೀಪ್ ಚಿತ್ರ, ಟಿವಿ ಶೋ, ಜಾಹಿರಾತುಗಳಿಗೆ ಬ್ರೇಕ್?

ಚುನಾವಣೆ ಮುಗಿಯುವವರೆಗೆ ಸುದೀಪ್ ಚಿತ್ರ, ಟಿವಿ ಶೋ, ಜಾಹಿರಾತುಗಳಿಗೆ ಬ್ರೇಕ್?

ನಟ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಸುದೀಪ್ ರ ಚಲನಚಿತ್ರಗಳನ್ನು , ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳನ್ನು ತಡೆ ಹಿಡಿಯುವಂತೆ ಕೋರಿ ಶಿವಮೊಗ್ಗದ ವಕೀಲರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕನ್ನಡದ ಚಲನಚಿತ್ರನಟ ಮಾನ್ಯ ಕಿಚ್ಚ ಸುದೀಪ್ ರವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವ ವರೆಗೂ ಅವರ ನಟನೆಯ ಯಾವುದೇ ಚಲನ ಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿ.ಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ.ಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಹಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕೆ‌.ಪಿ.ಶ್ರೀಪಾಲ ಎಂಬವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಸುದೀಪ್ ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದನ್ನು ಅವರೇ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನ ಚಿತ್ರಗಳು, ಮತ್ತು ಟಿ.ವಿ.ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ, ಅದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ, ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!