Sunday, January 25, 2026
Homeಟಾಪ್ ನ್ಯೂಸ್SIDDARAMAIAH: ಹೈಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ 2ನೇ ಬಾರಿ ಸಿಎಂ ಆಗಿರುವೆ: ಸಿದ್ದರಾಮಯ್ಯ

SIDDARAMAIAH: ಹೈಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ 2ನೇ ಬಾರಿ ಸಿಎಂ ಆಗಿರುವೆ: ಸಿದ್ದರಾಮಯ್ಯ

ವಿಜಯಪುರ : ರಾಜ್ಯದ ಜನರು ಮತ್ತು ಹೈಕಮಾಂಡ್ (High command) ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ ಜಿಲ್ಲೆ ವತಿಯಿಂದ ಅವರು ಇಂದು ವಿಜಯಪುರದ ವಿ. ಬಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು.

ವಿಜಯಪುರದ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಎಂದರು. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದು, ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ ಎಂದರು.

82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ:

ಜಿಲ್ಲೆಯಲ್ಲಿ 800 ಕ್ಕೂ ಹೆಚ್ಚು ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ. ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ , ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ನ್ನು ಸ್ಥಾಪಿಸಲಾಗಿದೆ ಎಂದರು.

‘ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ’
ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು.

160 ಕೋಟಿ ವೆಚ್ಚದ ಮೇಲ್ಸೇತುವೆ:
ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ 160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದು ಅದನ್ನು ನೆರವೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಶಾಸಕ, ಬಸನಗೌಡ ಯತ್ನಾಳ್, ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ‘ದಾಖಲೆಯಂತೆ, ದಾಖಲೆ.. ದೇವರಾಜ್ ಅರಸು ಎಲ್ಲಿ.. ಇವರೆಲ್ಲಿ ಬ್ರದರ್​?’ ಸಿದ್ದು ವಿರುದ್ಧ ಕುಮಾರಣ್ಣ ಕಿಡಿ

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!