ಮೈಸೂರು : ಮೈಸೂರು (Mysuru) ನಗರದೊಳಗೆ ಎರಡು ಫ್ಲೈ ಓವರ್ (Flyover) ಮಾಡುವುದಕ್ಕೆ ನಮ್ಮ ವಿರೋಧವಿದೆ ಎಂದು ಎಂಪಿ ಯದುವೀರ್ ಒಡೆಯರ್ (Yaduveer wadiyar) ಹೇಳಿದ್ದಾರೆ.
ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಈ ಸಂಬಂಧ ಈಗಾಗಲೇ ಸಾಯಿಲ್ ಟೆಸ್ಟ್ ಮಾಡ್ತಿದ್ದಾರೆ ಇದಕ್ಕೆ ನಮ್ಮ ವಿರೋಧವಿದೆ. ಜೆ ಎಲ್ ಬಿ ರಸ್ತೆ, ವಿನೋಬ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ.ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು.ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.ಡಿಪಿಆರ್ ಕೂಡ ಸಿದ್ದ ಪಡಿಸುತ್ತಿದ್ದಾರೆ.ಇದಕ್ಕೆ ನಮ್ಮ ತೀವ್ರ ವಿರೋಧವಿದೆ.ವಿನೋಬ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಮರಗಳ ಹನನ ಆಗಲಿದೆ.ಹಾಗಾಗಿ ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು ಎಂದಿದ್ದಾರೆ.
ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು.ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು.ಫ್ಲೈ ಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ.ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ.ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ.ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ.ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ.ಜನರ ವಿರೋಧದ ನಡುವೆ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ.ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು.ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಯದುವೀರ್,ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ಮಾಡ್ತಿದ್ದಾರೆ.ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು.ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು.ಅದು ರಾಜ್ಯ ಸರ್ಕಾರದ ಕರ್ತವ್ಯ.ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ.ಈ ಹಿಂದಿನಿಂದಲೂ ಸಿದ್ದರಾಮಯ್ಯ ಏನೇ ಆದರೂ ಕೇಂದ್ರ ಸರ್ಕಾರದ ಮೇಲೇ ಆರೋಪ ಮಾಡೋದು ರೂಢಿಯಾಗಿದೆ.ಅದನ್ನು ಬಿಟ್ಟು ರೈತರ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದರು.
ಇದನ್ನೂ ಓದಿ : ಸಿಎಂ ತವರು ಜಿಲ್ಲೆಯಲ್ಲೇ ಅಪರಾಧಗಳ ಪ್ರಮಾಣ ಹೆಚ್ಚಳ – ಯದುವೀರ್ ಒಡೆಯರ್ ವಾಗ್ದಾಳಿ